Latest Kannada Nation & World

ಚಾಂಪಿಯನ್ಸ್ ಟ್ರೋಫಿ ಜಯಿಸಿದ ಭಾರತದ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ, ಸಚಿನ್, ಸಿದ್ದರಾಮಯ್ಯ

Share This Post ????

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್​ನಲ್ಲಿ ಕಿವೀಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಭಾರತ ನೂತನ ಚರಿತ್ರೆ ಸೃಷ್ಟಿಸಿದೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಮೂರು ಬಾರಿ ಟ್ರೋಫಿ (2002, 2013, 2025) ಗೆದ್ದ ಮೊದಲ ತಂಡದ ಎಂಬ ಹಿರಿಮೆಗೆ ಪಾತ್ರವಾಗಿದೆ. ನ್ಯೂಜಿಲೆಂಡ್ ನೀಡಿದ್ದ 252 ರನ್​ಗಳ ಗರಿ ಬೆನ್ನಟ್ಟಿದ ಭಾರತ, 49 ರನ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗೆದ್ದು ಬೀಗಿತು. ಭಾರತ ಟ್ರೋಫಿಗೆ ಮುತ್ತಿಕ್ಕಿದ ಬೆನ್ನಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದಿಗ್ಗಜ ಸಚಿನ್ ತೆಂಡೂಲ್ಕರ್​ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!