Latest Kannada Nation & World
ಶಿವಣ್ಣನಿಗೆ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಸಿಎಂ ಸಿದ್ದರಾಮಯ್ಯ, ಇಂದು ಶಿವರಾಜ್ ಕುಮಾರ್‌ಗೆ ಸರ್ಜರಿ
“ಅನಾರೋಗ್ಯದ ನಿಮಿತ್ತ ಇಂದು (ಡಿಸೆಂಬರ್ 24) ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.