Latest Kannada Nation & World
ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 14 ರಂದು ರಜೆ ಘೋಷಣೆ; ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಸಮಾನತೆ ಮತ್ತು ಸಂವಿಧಾನಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಗಳನ್ನು ಗೌರವಿಸಲು ಸರ್ಕಾರ ಏಪ್ರಿಲ್ 14 ರಂದು ಅವರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. “ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದ ಅಂಬೇಡ್ಕರ್ ಅವರಿಗೆ ಗೌರವ ರೂಪವಾಗಿ ರಜೆ ನೀಡಲಾಗುತ್ತಿದೆ. ಈ ಕುರಿತು ಅಧಿಕೃತ ಮಾಹಿತಿ ಕೂಡ ಲಭ್ಯವಾಗಿದೆ. ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.