Latest Kannada Nation & World
‘ಅಧಿಪತ್ರ’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಬಿಗ್ ಬಾಸ್ ಕನ್ನಡ 9ರ ವಿಜೇತ ರೂಪೇಶ್ ಶೆಟ್ಟಿ

ಫೆ. 7ರಂದು ತೆರೆಗೆ
ಅಧಿಪತ್ರ ಚಿತ್ರದಲ್ಲಿ ರೂಪೇಶ್ ಶೆಟ್ಟಿ, ನಿರೂಪಕಿ ಜಾಹ್ನವಿ ಜೊತೆಯಲ್ಲಿ ಎಂ.ಕೆ.ಮಠ, ಕಾಂತಾರ ಚಿತ್ರ ಖ್ಯಾತಿಯ ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್ ಉಪ್ಪಾಲ್, ಪ್ರಶಾಂತ್ ತಾರಾಬಳಗದಲ್ಲಿದ್ದಾರೆ. ಶ್ರೀಹರಿ ಶ್ರೇಷ್ಠಿ ಸಂಗೀತ, ಶ್ರೀಕಾಂತ್ ಸಂಕಲನ, ರಿತ್ವಿಕ್ ಮುರುಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಟ್ರೇಲರ್ ಮೂಲಕ ಆಮಂತ್ರಣ ಕೊಟ್ಟಿರುವ ಅಧಿಪತ್ರ ಸಿನಿಮಾ ತಂಡ ಫೆಬ್ರವರಿ 7ಕ್ಕೆ ಚಿತ್ರವನ್ನು ತೆರೆಗೆ ತರುತ್ತಿದೆ. ಇತ್ತೀಚೆಗಷ್ಟೇ ಇದೇ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿತ್ತು. ಲಹರಿ ವೇಲು, ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ನಿರ್ಮಾಪಕ ಆರ್ ಜೆ ಪ್ರದೀಪ್, ಹೀಗೂ ಉಂಟೆ ಖ್ಯಾತಿಯ ಆರ್. ನಾರಾಯಣಸ್ವಾಮಿ ಸೇರಿ ಹಲವರು ಭಾಗವಹಿಸಿದ್ದರು.