Latest Kannada Nation & World
ಅಮ್ಮ- ಮಗಳ ಬಾಂಧವ್ಯದ ಮೇಲೆ ಸೇಡಿನ ಕಾಡ್ಗಿಚ್ಚು, ಸೋಮವಾರದಿಂದ ನಾ ನಿನ್ನ ಬಿಡಲಾರೆ ಸೀರಿಯಲ್ ಶುರು; ಹೀಗಿದೆ ಕಥೆ, ಪಾತ್ರವರ್ಗದ ವಿವರ

Naa Ninna Bidalaare Serial: ಜೀ ಕನ್ನಡ ವಾಹಿನಿ ತನ್ನ ವೀಕ್ಷಕರನ್ನು ಮನರಂಜಿಸಲು ಮತ್ತೊಂದು ಅಮೋಘ ಧಾರಾವಾಹಿಯನ್ನು ಹೊತ್ತುತರಲಿದೆ. ‘ನಾ ನಿನ್ನ ಬಿಡಲಾರೆ’ ಎಂಬ ಶೀರ್ಷಿಕೆಯುಳ್ಳ ಈ ಧಾರಾವಾಹಿಯು ಥ್ರಿಲ್ಲರ್, ಹಾರರ್ ಮತ್ತು ಅಮ್ಮ-ಮಗಳ ಬಾಂಧವ್ಯಕ್ಕೆ ಒತ್ತು ಕೊಟ್ಟಿರುವುದರಿಂದ ಎಲ್ಲ ವಯೋಮಿತಿಯ ಜನರನ್ನು ತನ್ನತ್ತ ಸೆಳೆಯಲಿದೆ ಎಂಬ ಸುಳಿವು ನೀಡಿದೆ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯ ಮೊದಲ ಪ್ರೋಮೋ ಈಗಾಗಲೇ ಕರುನಾಡ ವೀಕ್ಷಕರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ, ತಂಡದ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಕುತೂಹಲದಲ್ಲಿದ್ದಾರೆ.