Latest Kannada Nation & World
ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಕೌಂಟಿ ಕ್ರಿಕೆಟ್ ಆಡೋದು ಅಸಾಧ್ಯ? ಅದಕ್ಕಿರುವುದು ಒಂದೇ ಮಾರ್ಗ, ಏನದು?

ಆಸ್ಟ್ರೇಲಿಯಾ ಪ್ರವಾಸದ ನಂತರ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್ನಲ್ಲಿ ಕಣಕ್ಕಿಳಿಯಲಿದ್ದಾರೆ. ಮುಂದಿನ ಟೆಸ್ಟ್ ಸರಣಿಗೂ ಮುನ್ನ ಸಂಪೂರ್ಣ ವೈಟ್ ಬಾಲ್ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2025ರ ಐಪಿಎಲ್ ವೇಳಾಪಟ್ಟಿ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ ಟೂರ್ನಿಯು ಮಾರ್ಚ್ ಮೂರನೇ ವಾರದಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದೆ. ಆದರೆ, ಫೈನಲ್ ಪಂದ್ಯ ಮೇ ಕೊನೆಯ ವಾರದಲ್ಲಿ ನಡೆಸಲಾಗುತ್ತದೆ. ಅಂದಾಜಿನ ಪ್ರಕಾರ, ಈ ಬಾರಿ ಮೇ 25 ರಂದು ಫೈನಲ್ ನಡೆಯಲಿದೆ ಎಂದು ಹೇಳಲಾಗಿದೆ.