Latest Kannada Nation & World
ಉಕ್ಕು ಆಮದು ಮೇಲೆ ಶೇ 12ರಷ್ಟು ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ ಸರ್ಕಾರ; ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಸ

ನವದೆಹಲಿ : ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು, ಉಕ್ಕು ಆಮದಿನ ಮೇಲೆ ಶೇ.12 ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ ತಯಾರಿಸಿದ ಕೆಲವು ಉತ್ಪನ್ನಗಳ ಆಮದಿನ ಮೇಲೆ 12 ರಷ್ಟು ಸುರಕ್ಷತಾ ಸುಂಕ ವಿಧಿಸುವ ನಿರ್ಧಾರವನ್ನು ಸೋಮವಾರ (ಏಪ್ರಿಲ್ 21) ಕೈಗೊಂಡಿದೆ. ಇದಕ್ಕೆ ಸಂಬಂಧಿಸಿ ಕೇಂದ್ರವು ಅಧಿಸೂಚನೆಯನ್ನು ಹೊರಡಿಸಿದೆ.