Latest Kannada Nation & World
ಉಪೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘UI’ ಪ್ರೀ ರಿಲೀಸ್; ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ
ಪ್ರೀ ರಿಲೀಸ್ ಇವೆಂಟ್‌ನಲ್ಲಿ ಭಾಗಿಯಾದ ಗಣ್ಯರು
ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ ಪವನ್ ಒಡೆಯರ್, ಡಾ ಸೂರಿ, ವೀರೇಶ ಚಿತ್ರಮಂದಿರದ ಕುಶಾಲ್ ಮುಂತಾದ ಗಣ್ಯರು ಪ್ರೀ ರಿಲೀಸ್ ಇವೆಂಟ್ ನಲ್ಲಿ ಭಾಗಿಯಾಗಿ “UI” ಗೆ ಶುಭ ಕೋರಿದರು.