Astrology
ಐತಿಹಾಸಿಕ ಬೆಂಗಳೂರು ಕರಗ ಏಪ್ರಿಲ್ 4ಕ್ಕೆ ಆರಂಭ; ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ

Bengaluru Karaga 2025: ಐತಿಹಾಸಿಕ ಬೆಂಗಳೂರು ಕರಗ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವದ ಆಚರಣೆಗಳು ನಡೆಯಲಿವೆ. ನಾಳೆ, ಶುಕ್ರವಾರ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಆರಂಭವಾಗಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಅವರು ನಿರಂತರವಾಗಿ ಕರಗ ಹೊರುತ್ತಾ ಬಂದಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಧರ್ಮರಾಯ ದೇವಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವಾಲಯದ ಸ್ವಚ್ಛತಾ ಕಾರ್ಯ ನಡೆದಿದ್ದು, ಸಿಬ್ಬಂದಿಯು ದೇವಾಲಯ, ರಥ ಸೇರಿದಂತೆ ಸಂಪೂರ್ಣ ಶುಚಿಗೊಳಿಸುತ್ತಿದ್ದಾರೆ.