Latest Kannada Nation & World
ಐಪಿಎಲ್ ಆಡಲು ನಿರ್ಧರಿಸಿದ್ದಕ್ಕೆ ಮುಂಬೈ ಇಂಡಿಯನ್ಸ್ ಆಟಗಾರನಿಗೆ ಲೀಗಲ್ ನೋಟಿಸ್ ಕಳುಹಿಸಿದ ಪಾಕಿಸ್ತಾನ ಕ್ರಿಕೆಟ್!

ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಇತರ ಕ್ರಿಕೆಟ್ ಮಂಡಳಿಗಳಿಗೆ ಮಿಲಿಯನ್ ಡಾಲರ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಬಹಿಷ್ಕರಿಸುವಂತೆ ಪಾಕಿಸ್ತಾನ ತಂಡದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಅವರು ಇತ್ತೀಚೆಗೆ ಮನವಿ ಮಾಡಿದ್ದರು. ಇತರ ಕ್ರಿಕೆಟ್ ಮಂಡಳಿಗಳು ತಮ್ಮ ಆಟಗಾರರನ್ನು ಐಪಿಎಲ್ಗೆ ಕಳುಹಿಸುವುದನ್ನು ನಿಲ್ಲಿಸಬೇಕು. ಏಕೆಂದರೆ ಬಿಸಿಸಿಐ ತಮ್ಮ ಆಟಗಾರರನ್ನು ಬೇರೆ ಫ್ರಾಂಚೈಸಿ ಲೀಗ್ಗೆ ಕಳುಹಿಸುವುದಿಲ್ಲ ಎಂದು ದಿಗ್ಗಜ ಕ್ರಿಕೆಟಿಗ ವಿಷಕಾರಿದ್ದರು.