Latest Kannada Nation & World
ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ತಂಡ ಬಿಳಿ ಜಾಕೆಟ್ ಧರಿಸುವುದೇಕೆ; ಇದರ ಮಹತ್ವವೇನು?

ಭಾರತಕ್ಕೆ ಐತಿಹಾಸಿಕ ಗೆಲುವು
ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ಗಳಿಂದ ಗೆದ್ದು ಬೀಗಿತು. ಕಿವೀಸ್ ನೀಡಿದ್ದ 252 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ರೋಹಿತ್ ಶರ್ಮಾ ಪಡೆ, 49 ಓವರ್ಗಳಲ್ಲಿ ಗುರಿ ತಲುಪಿತು. 2002, 2013ರಲ್ಲಿ ಪ್ರಶಸ್ತಿ ಎತ್ತಿ ಹಿಡಿದ್ದಿದ್ದ ಭಾರತ ಇದೀಗ 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಬರ ನೀಗಿಸಿದೆ. 2024ರ ಟಿ20 ವಿಶ್ವಕಪ್ ನಂತರ ಸತತ 2ನೇ ಐಸಿಸಿ ಟ್ರೋಫಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿದೆ.