Latest Kannada Nation & World
ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ ಅಂಗೀಕರಿಸಿದ ಲೋಕಸಭೆ; ಪರವಾಗಿ 269 ಮತ, ವಿರುದ್ಧ 198 ಮತ ಚಲಾವಣೆ
ಒಂದು ದೇಶ ಒಂದು ಚುನಾವಣೆ ಮಸೂದೆ ಮಂಗಳವಾರ ಲೋಕಸಭೆಯಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದು, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮತ್ತು ಇಂಡಿಯಾ ಬ್ಲಾಕ್ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮಸೂದೆಯನ್ನು ಬೆಂಬಲಿಸಿದರೆ, ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಶಿವಸೇನೆ (ಯುಬಿಟಿ) ಸೇರಿದಂತೆ ಹಲವು ವಿರೋಧ ಪಕ್ಷಗಳು ಅದನ್ನು ವಿರೋಧಿಸಿವೆ. ಒಟ್ಟು 32 ಪಕ್ಷಗಳು ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಬೆಂಬಲ ನೀಡಿದರೆ, 15 ಪಕ್ಷಗಳು ವಿರೋಧಿಸುತ್ತಿವೆ. ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿಯಂತಹ ಸ್ವತಂತ್ರ ಚಿಂತನೆಯ ಪಕ್ಷಗಳು ಕೂಡ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಸಕ್ರಿಯಗೊಳಿಸುವ ಶಾಸನವನ್ನು ಬೆಂಬಲಿಸಿರುವುದು ಗಮನಸೆಳೆದಿದೆ.