Latest Kannada Nation & World
ಕನ್ನಡದ ಕಂಗುವಾ ಆವೃತ್ತಿಗೆ ಸಂಭಾಷಣೆ, ಲಿರಿಕ್ಸ್ ಬರೆದ ವರದರಾಜ್ ಚಿಕ್ಕಬಳ್ಳಾಪುರ; ಸಾಲು ಸಾಲು ಹಿಟ್ ಕೊಟ್ಟ ಡಬ್ಬಿಂಗ್ ಬರಹಗಾರ

ವರದರಾಜ್ ಅವರು ತೆಲುಗು, ತಮಿಳು ಮಲಯಾಳಂ ಮತ್ತು ಹಿಂದಿಯಿಂದ ಕನ್ನಡಕ್ಕೆ ಡಬ್ ಆದ ‘ಮಾಸ್ಟರ್ ‘, ‘ಗೀತ ಗೋವಿಂದಂ’, ‘RRR’, ‘ಮಗಧೀರ’, ‘ಬೃಂದಾವನಂ’, ‘ಮಿಥುನಂ’, ‘ವಡ ಚೆನ್ನೈ’, ‘ಇಮೈಕ್ಕ ನೋಡಿಗಳ್ ‘, ‘ಕಾತುವಾಕ್ಕುಲ ರೆಂಡು ಕಾದಲ್’, ‘ಬೀಸ್ಟ್ ‘, ‘ವಿಕ್ರಮ್ ‘, ‘ಪೊನ್ನಿಯನ್ ಸೆಲ್ವನ್ 1’, ‘ಪಾಲಾರ್’ ‘ಪುಷ್ಪ’ ಮುಂತಾದ ಬೇರೆ ಭಾಷೆಯಿಂದ ಕನ್ನಡಕ್ಕೆ ಡಬ್ ಆದ ಚಿತ್ರಗಳ ಜತೆಗೆ, ಕನ್ನಡದಿಂದ ಬೇರೆ ಭಾಷೆಗಳಿಗೆ ಡಬ್ ಆಗಿರುವ ‘ಕೆಂಪೇಗೌಡ 2’, ‘ಪೊಗರು’, ‘ಕಿಸ್ ‘, ‘ವಂಚನ’ ‘ರೆಮೋ’, ‘ಉಗ್ರಾವತಾರಂ’, ‘ ಅನಗನಗಾ ಓಕ ಅಡವಿ ‘, ‘ಕಬ್ಜ’ ಮತ್ತು ‘ಟೆರರ್ ‘ ಮುಂತಾದ ಚಿತ್ರಗಳಿಗೆ ವರದರಾಜು ಸಾಹಿತ್ಯ ಮತ್ತು ಸಂಭಾಷಣೆ ರಚಿಸಿದ್ದಾರೆ. ವರದರಾಜು ಬರೆದಿರುವ ‘ಮಾಸ್ಟರ್ ‘ ಚಿತ್ರದ ‘ಮನಸೇ ಕರಗದಾ ಲೋಕವೀ ಲೋಕವು’, ‘ಪುಷ್ಪ’ ಚಿತ್ರದಲ್ಲಿ ‘ಶ್ರೀವಲ್ಲಿ’, ‘ಸಾಮಿ ಸಾಮಿ’, ‘ಹೂಂ ಅಂತೀಯ ಮಾಮ ಉಹೂಂ ಅಂತೀಯ ಮಾಮ’, ‘RRR’ ಚಿತ್ರದ ‘ಹಳ್ಳಿನಾಟು’, ‘ದೋಸ್ತಿ’, ‘ಜನನಿ’, ‘ಕೊಮರಂ ಭೀಮ್ ಉಧೋ’ ಮುಂತಾದ ಹಾಡುಗಳು ಸಾಕಷ್ಟು ಯಶಸ್ವಿಯಾಗಿವೆ.