Latest Kannada Nation & World
ಕನ್ನಡ ಸಿನಿಮಾ ಮ್ಯಾಕ್ಸ್‌ಗೆ ಇಂಗ್ಲೀಷ್ ಹೆಸರು ಯಾಕೆ ಎಂಬ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

ಕಲೈಪುಲಿ ಎಸ್ ದಾನು ಅವರ ವಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ, ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಈಗ ಇದೇ ಸಿನಿಮಾ ಐದು ಭಾಷೆಯ ಬದಲು ಕೇವಲ ಮೂರು ಭಾಷೆ ಅಂದರೆ, ಕನ್ನಡ, ತೆಲುಗು, ತಮಿಳಿನಲ್ಲಿ ಮಾತ್ರ ತೆರೆಗೆ ಬರಲಿದೆ. ಈ ವಿಚಾರವನ್ನು ಸ್ವತಃ ಚಿತ್ರದ ನಿರ್ಮಾಪಕ ಕಲೈಪುಲಿ ದಾನು ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಚಿತ್ರಕ್ಕೆ ಯು\ಎ ಪ್ರಮಾಣ ಪತ್ರ ಸಿಕ್ಕಿರುವ ವಿಚಾರವನ್ನೂ ಹೇಳಿಕೊಂಡಿದ್ದಾರೆ.