Latest Kannada Nation & World
ಕ್ರಿಕೆಟ್-ಫುಟ್ಬಾಲ್ ಪ್ರಿಯರಿಗೆ ಭರ್ಜರಿ ಮನರಂಜನೆ; ಚಿನ್ನಸ್ವಾಮಿ ಅಣತಿ ದೂರದಲ್ಲೇ ಬೆಂಗಳೂರಿನ ಮತ್ತೊಂದು ಪಂದ್ಯ!

ಏಪ್ರಿಲ್ 2ರ ಬುಧವಾರ ಬೆಂಗಳೂರಿನಲ್ಲಿ ಕ್ರೀಡಾ ಪ್ರೇಮಿಗಳಿಗೆ ಭರ್ಜರಿ ಮನರಂಜನೆ ಸಿಗಲಿದೆ. ಒಂದೆಡೆ ಕ್ರಿಕೆಟ್ ಅಭಿಮಾನಿಗಳಿಗೆ, ಮತ್ತೊಂದೆಡೆ ಫುಟ್ಬಾಲ್ ಅಭಿಮಾನಿಗಳಿಗೆ ಫುಲ್ ಮೀಲ್ಸ್ ಸಿಗಲಿದೆ. ಹೌದು, ಬುಧವಾರ ಸಂಜೆ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ 18ನೇ ಆವೃತ್ತಿಯ ಐಪಿಎಲ್ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದೆ. ಇದೇ ಮೈದಾನದಿಂದ ಅಣತಿ ದೂರ ಅಂದರೆ ಕಿಲೋ ಮೀಟರ್ ದೂರದಲ್ಲಿರುವ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂಡಿಯನ್ ಸೂಪರ್ ಲೀಗ್ ಸೆಮಿಫೈನಲ್ನಲ್ಲಿ ಬೆಂಗಳೂರು ಎಫ್ಸಿ ಮತ್ತು ಗೋವಾ ತಂಡಗಳ ನಡುವೆ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯವೂ ಸಂಜೆ 7.30ಕ್ಕೆ ಆರಂಭವಾಗಲಿದೆ