Latest Kannada Nation & World
ಗೆಲ್ಲಬೇಕಿದ್ದ ಪಂದ್ಯದಲ್ಲಿ ಯುಪಿ ವಿರುದ್ಧ ಸೋತು ಹೊರಬಿದ್ದ ಆರ್ಸಿಬಿ; ಪ್ಲೇಆಫ್ಗೆ ಮುಂಬೈ, ಗುಜರಾತ್

ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ದಾಖಲಿಸಿದ 226 ರನ್ಗಳ ಬೃಹತ್ ಮೊತ್ತವನ್ನು ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಪಂದ್ಯ ಬಾಕಿ ಇರುವಂತೆಯೇ ಡಬ್ಲ್ಯುಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ. ರಿಚಾ ಘೋಷ್ (69) ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೋರಾಡುವ ಮೂಲಕ ಪ್ಲೇಆಫ್ ಕನಸನ್ನು ಜೀವಂತವಾಗಿಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಯುಪಿ ವಿರುದ್ಧ ಆರ್ಸಿಬಿ ಸೋಲುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿದವು. ಶತಕ ವಂಚಿತರಾದ ಜಾರ್ಜಿಯಾ ವೋಲ್ (99) ಅವರ ಸ್ಫೋಟಕ ಆಟದ ನೆರವಿನಿಂದ ಯುಪಿ ತನ್ನ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿತು. ಇದು ಡಬ್ಲ್ಯುಪಿಎಲ್ ಇತಿಹಾಸದಲ್ಲಿ ತಂಡವೊಂದು ದಾಖಲಿಸಿದ ಬೃಹತ್ ಮೊತ್ತ. ಈ ಗುರಿ ಬೆನ್ನಟ್ಟಿದ ಆರ್ಸಿಬಿ 19.3 ಓವರ್ಗಳಲ್ಲಿ 213ಕ್ಕೆ ಆಲೌಟ್ ಆಯಿತು.