Latest Kannada Nation & World
ಚಂದನವನಕ್ಕೆ ಬಂದ ಡಾ ರಾಜ್‌ಕುಮಾರ್ ಕುಟುಂಬದ ಮತ್ತೊಂದು ಕುಡಿ; ನಿಂಬಿಯ ಬನಾದ ಮ್ಯಾಗ ಚಿತ್ರದ ಮೂಲಕ ನಾಯಕನಾದ ಷಣ್ಮುಖ

ಷಣ್ಮುಖ ಅವರಿಗೆ ನಾಯಕಿಯಾಗಿ ತನುಶ್ರೀ ಅಭಿನಯಿಸಿದ್ದಾರೆ. 25 ವರ್ಷಗಳ ನಂತರ “ಮೇಘಮಾಲೆ” ಚಿತ್ರದ ಖ್ಯಾತಿಯ ಸುನಾದ್ ರಾಜ್ ಈ ಚಿತ್ರದಲ್ಲಿ ನಟಿಸಿದ್ದಾರೆ. ತ್ರಿಶಾ (ಚೆನ್ನೈ), ಪಂಕಜ್ ನಾರಾಯಣ್, ಸಂಗೀತ, ಭವ್ಯ, ರಾಮಕೃಷ್ಣ, ಮೂಗು ಸುರೇಶ್, ಪದ್ಮಾ ವಾಸಂತಿ, ಭವ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆರೋನ್ ಕಾರ್ತಿಕ್ ಸಂಗೀತ, ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನವಿದೆ.