Latest Kannada Nation & World
ಸುದೀರ್ಘ ಪರಂಪರೆ ಬಿಟ್ಟುಹೋದ ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ; ಇದು ಮನಮೋಹನ್ ಸಿಂಗ್ ಶೈಕ್ಷಣಿಕ, ರಾಜಕೀಯ, ಆರ್ಥಿಕ ಸಾಧನೆಗಳ ನೋಟ

ನವದೆಹಲಿ: ಭಾರತದ ಮಾಜಿ ಪ್ರಧಾನಿ, ಪ್ರಸಿದ್ಧ ಅರ್ಥಶಾಸ್ತ್ರಜ್ಞ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಡಾ. ಮನಮೋಹನ್ ಸಿಂಗ್ ಅವರು ಗುರುವಾರ (ಡಿಸೆಂಬರ್ 27 ರಾತ್ರಿ 9.50) ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ತಮ್ಮ ಆರಂಭಿಕ ರಾಜಕೀಯ ದಿನಗಳಲ್ಲಿ ಹಣಕಾಸು ಖಾತೆಯನ್ನು ಹೊಂದಿದ್ದ ಸಿಂಗ್, 1990ರ ದಶಕದಲ್ಲಿ ಆರ್ಥಿಕ ಸುಧಾರಣೆಗಳನ್ನು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 1991ರಲ್ಲಿ ದೇಶವು ಆರ್ಥಿಕ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಅವಧಿಯಲ್ಲಿ ದಿವಂಗತ ಪ್ರಧಾನಿ ಪಿವಿ ನರಸಿಂಹರಾವ್ ಅವರು ಮನಮೋಹನ್ ಸಿಂಗ್ ಅವರನ್ನು ಹಣಕಾಸು ಸಚಿವರಾಗಿ ನೇಮಿಸಿದ್ದರು. ಅಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ನಮ್ಮ ದೇಶದ ಆರ್ಥಿಕತೆ ಬೆಳೆಯಲು ಭದ್ರ ಬುನಾದಿ ಹಾಕಿದ್ದರು ಸಿಂಗ್. ಇಬ್ಬರೂ ನಾಯಕರು ಒಟ್ಟಾಗಿ, ದೇಶದ ಆರ್ಥಿಕ ಸುಧಾರಣೆಗೆ ಸಾಕಷ್ಟು ಕೊಡುಗೆ ನೀಡಿ ಬಿಕ್ಕಟ್ಟಿನಿಂದ ಹೊರತಂದರು. ಅವರ ಶೈಕ್ಷಣಿಕ ಹಾಗೂ ರಾಜಕೀಯ ಸಾಧನೆಗಳ ಗುಚ್ಛ ಇಲ್ಲಿದೆ ನೋಡಿ.