Latest Kannada Nation & World
ಚೊಚ್ಚಲ ಅಂಡರ್-19 ವನಿತೆಯರ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ; ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು
ಭಾರತ ಅಂಡರ್ 19 ವನಿತೆಯರ ತಂಡವು ಉದ್ಘಾಟನಾ ಆವೃತ್ತಿಯ ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬಾಂಗ್ಲಾದೇಶ ವಿರುದ್ಧದ ಫೈನಲ್ ಪಂದ್ಯದಲ್ಲಿ 41 ರನ್‌ಗಳಿಂದ ರೋಚಕ ಜಯ ಸಾಧಿಸಿತು. ಕೌಲಾಲಂಪುರದ ಬೇಯುಮಾಸ್ ಓವಲ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಬ್ಬರದಾಟವಾಡಿದ ಭಾರತೀಯ ನಾರಿಯರು, ಗೆಲುವಿನ ಟ್ರೋಫಿ ಎತ್ತಿಹಿಡಿದರು. ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ನಡೆಸಿತು. ನಿರೀಕ್ಷೆಯಂತೆ ಬ್ಯಾಟ್ ಬೀಸಲು ವಿಫಲವಾಗಿ, ಕೊನೆಗೆ ಏಳು ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿದರು. ಇದಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಬಾಂಗ್ಲಾದೇಶ, 76 ರನ್ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿತು.