ಧನು ರಾಶಿಯವರ ಕನಸು ನನಸಾಗುತ್ತೆ, ಮಕರ ರಾಶಿಯವರಿಗೆ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಲಿದೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಧನು, ಮಕರ, ಕುಂಭ, ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 15ರ ಭಾನುವಾರದಿಂದ 21ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಧನು ರಾಶಿ
ಆತ್ಮೀಯರ ಸಹಾಯದಿಂದ ಬಹುದಿನದ ಕನಸೊಂದು ನನಸಾಗಲಿದೆ. ಕುಟುಂಬದಲ್ಲಿ ಸಂತೋಷದ ಕ್ಷಣಗಳು ನಿಮ್ಮದಾಗಲಿವೆ. ಬಿಡುವಿಲ್ಲದೆ ದುಡಿದು ಬೇಸತ್ತು ಮನರಂಜನೆಗಾಗಿ ಹೆಚ್ಚಿನ ಹಣ ಖರ್ಚು ಮಾಡುವಿರಿ. ಮನೆತನಕ್ಕೆ ಸೇರಿದ ಹಳೆಯ ಮನೆಯನ್ನು ನವೀಕರಿಸಲು ಹಣವನ್ನು ಖರ್ಚು ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಇದೆ. ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಉದ್ಯೋಗದಲ್ಲಿ ನಿರೀಕ್ಷಿಸಿದಂತೆ ನಿಮ್ಮ ಪ್ರಭಾವವು ಹೆಚ್ಚುತ್ತದೆ. ಕುಟುಂಬದ ದೊಡ್ಡ ಸಮಸ್ಯೆಯನ್ನು ಬಗೆಹರಿಸುವಿರಿ. ಸರಿಯಾದ ಕಾರಣವಿಲ್ಲದೆ ಆತ್ಮೀಯರೊಂದಿಗೆ ವಾದದಲ್ಲಿ ನಿರತರಾಗುವಿರಿ. ಸೋದರ ಅಥವಾ ಸೋದರಿಯ ಜೊತೆಗಿನ ಪಾಲುಗಾರಿಕೆಯ ವ್ಯವಹಾರದಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ. ಸಾಕು ಪ್ರಾಣಿಗಳ ಆರೋಗ್ಯ ನಿರ್ವಹಣೆಗಾಗಿ ಹಣ ವೆಚ್ಚವಾಗುತ್ತದೆ. ಕೋಪವು ಬಂದಷ್ಟೇ ವೇಗವಾಗಿ ಮರೆಯಾಗುತ್ತದೆ. ಅಜೀರ್ಣದ ತೊಂದರೆ ಇರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮಕರ ರಾಶಿ
ಆತುರದಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಆದರೆ ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ದುಡುಕಿ ಮಾತು ಆಡುವುದಿಲ್ಲ. ನಿಮ್ಮಿಂದಾಗಿ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಬೇರೆಯವರಲ್ಲಿ ಬೇಸರ ತರಿಸುವಷ್ಟು ಮಾತನ್ನು ಆಡುವಿರಿ. ಕಷ್ಟಪಟ್ಟು ದುಡಿದು ಉದ್ಯೋಗದಲ್ಲಿ ಸದಾ ಜಯವನ್ನು ಗಳಿಸುವಿರಿ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ವ್ಯಾಪಾರದಲ್ಲಿ ಹೆಚ್ಚಿನ ಲಾಭವನ್ನು ಗಳಿಸುವಿರಿ. ಕೈತುಂಬ ಹಣವಿದ್ದರೂ ವಿನಾಕಾರಣ ಖರ್ಚು ಮಾಡುವಿರಿ. ತಂದೆಯಿಂದ ಹಣದ ಸಹಾಯ ದೊರೆಯುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ತಾಯಿಯವರು ಉಡುಗೊರೆಯಾಗಿ ಹಣವನ್ನು ನೀಡಲಿದ್ದಾರೆ. ಪ್ರತಿ ದಿನದ ಕೆಲಸದಲ್ಲಿ ಆಸಕ್ತಿ ಕಳೆದುಕೊಳ್ಳುವಿರಿ. ಶೀತದ ತೊಂದರೆ ನಿಮ್ಮನ್ನು ಕಾಡುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಕುಂಭ ರಾಶಿ
ಮೌನದಲ್ಲಿ ಸಂತಸವನ್ನು ಕಾಣುವಿರಿ. ನಿಮ್ಮ ಮನಸ್ಸಿನ ಭಾವನೆಗಳನ್ನು ಯಾರಿಗೂ ಹೇಳಿಕೊಳ್ಳುವುದಿಲ್ಲ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಯಾವುದೆ ವಿಚಾರವನ್ನು ಅರ್ಧಕ್ಕೆ ನಿಲ್ಲಿಸುವುದಿಲ್ಲ. ಗೆಲ್ಲುವವರೆಗೆ ನಿಮ್ಮ ಪ್ರಯತ್ನವನ್ನು ಬಿಡುವುದಿಲ್ಲ. ಕುಟುಂಬದಲ್ಲಿ ಪ್ರತಿಯೊಬ್ಬರದ್ದು ವಿಭಿನ್ನವಾದ ಭಾವನೆ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣದು. ಪರಿಸ್ಥಿತಿಯು ಒತ್ತಡಕ್ಕೆ ಒಳಗಾಗಿ ಉದ್ಯೋಗವನ್ನು ಬದಲಿಸುವಿರಿ. ಮಕ್ಕಳ ಮನದಾಳವನ್ನು ಅರಿಯಲು ವಿಫಲರಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಉಂಟಾಗದು. ಅತಿಯಾದ ಆಸೆ ಅಥವಾ ನಿರೀಕ್ಷೆ ಇರುವುದಿಲ್ಲ. ಹೆಚ್ಚಾದ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡುವಿರಿ. ಆರೋಗ್ಯದಲ್ಲಿ ಸಣ್ಣ ಮಟ್ಟದ ಸಮಸ್ಯೆ ಉಂಟಾಗುತ್ತದೆ. ಪ್ರಾಣಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡುವಿರಿ. ದಿನ ನಿತ್ಯದ ಕೆಲಸದಲ್ಲಿ ಕ್ರಮೇಣವಾಗಿ ಆಸಕ್ತಿ ಕಳೆದುಕೊಳ್ಳುವಿರಿ.
ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಮೀನ ರಾಶಿ
ಪರಿಸ್ಥಿತಿಯನ್ನು ಅರಿತುಕೊಂಡು ನಡೆದುಕೊಳ್ಳುವಿರಿ. ಸಂದರ್ಭಕ್ಕೆ ಅನುಗುಣವಾಗಿ ನಿಮ್ಮ ತೀರ್ಮಾನವನ್ನು ಬದಲಿಸುವಿರಿ. ದುಡುಕಿನ ಬುದ್ದಿ ಇರದ ಕಾರಣ ಜೀವನದಲ್ಲಿ ಯಾವುದೇ ತೊಂದರೆ ಬಾರದು. ವಿರೋಧಿಗಳ ಜೊತೆಯಲ್ಲಿಯೂ ಸಹ ಪ್ರೀತಿ-ವಿಶ್ವಾಸದಿಂದ ಬಾಳುವಿರಿ. ಇದರಿಂದ ಉದ್ಯೋಗದಲ್ಲಿ ಸಮಸ್ಯೆಗಳು ಇರುವುದಿಲ್ಲ. ಉದ್ಯೋಗದಲ್ಲಿ ನಿಮ್ಮ ತೀರ್ಮಾನಗಳಿಗೆ ಎಲ್ಲರ ಒಪ್ಪಿಗೆ ದೊರೆಯುತ್ತದೆ. ಹಣದ ಗಳಿಕೆಯನ್ನು ಹೆಚ್ಚಿಸಲು ಬಿಡುವಿನ ವೇಳೆ ಮತ್ತೊಂದು ಉದ್ಯೋಗ ಮಾಡುವಿರಿ. ಮನೆತನಕ್ಕೆ ಸಂಬಂಧಿಸಿದ ವ್ಯಾಪಾರವನ್ನು ಆರಂಭಿಸುವಿರಿ. ವಿಶ್ರಾಂತಿ ಇಲ್ಲದೆ ದುಡಿಯುವಿರಿ. ದೈಹಿಕವಾಗಿ ಬಳಲುವಿರಿ. ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆಗೆ ತಕ್ಕ ಅವಕಾಶ ಮತ್ತು ಯಶಸ್ಸು ಗಳಿಸುತ್ತಾರೆ. ಉನ್ನತ ವ್ಯಾಸಂಗದಲ್ಲಿ ಮುಂದುವರೆಯುವಿರಿ. ದೈಹಿಕ ವ್ಯಾಯಾಮದಿಂದ ಉತ್ತಮ ದೇಹದಾರ್ಢ್ಯ ಪಡೆಯುವಿರಿ. ಹಣಕಾಸಿನ ವಿಚಾರದಲ್ಲಿ ನಿರ್ದಿಷ್ಟವಾದ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).