Latest Kannada Nation & World
ಧ್ರುವ ಸರ್ಜಾ ನಟನೆಯ ಕೆಡಿ- ದಿ ಡೆವಿಲ್ ಸಿನಿಮಾದ ಮೊದಲ ಹಾಡು ಶಿವ ಶಿವ ಬಿಡುಗಡೆ ಶೀಘ್ರ

‘ಕೆಡಿ – ದಿ ಡೆವಿಲ್’ ಸಿನಿಮಾದ ಬಗ್ಗೆ
ಈ ಸಿನಿಮಾದಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಪ್ರೇಮ್ ಅವರದ್ದು. ಕೆ.ವಿ.ಎನ್. ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೋನ ವೆಂಕಟನಾರಾಯಣ್ ‘ಕೆಡಿ – ದಿ ಡೆವಿಲ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಧ್ರುವ ಸರ್ಜಾಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು, ಮೊದಲ ಬಾರಿಗೆ 260 ಪೀಸ್ ಆರ್ಕೆಸ್ಟ್ರಾ ಬಳಸಿದ್ದಾರೆ. ಇದು ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಎಂದು ಹೇಳಲಾಗುತ್ತಿದೆ. ಬಾಲಿವುಡ್ನ ಸಂಜಯ್ ದತ್, ಶಿಲ್ಪಾ ಶೆಟ್ಟಿ ಮುಂತಾದವರು ಚಿತ್ರದಲ್ಲಿ ಇರುವುದರಿಂದ ಕೆಡಿ ಕುರಿತು ಸಿನಿಮಾ ಪ್ರೇಕ್ಷಕರಲ್ಲಿ ನಿರೀಕ್ಷೆ ತುಸು ಹೆಚ್ಚೇ ಇದೆ.