Latest Kannada Nation & World
ನಮಗೂ ಸ್ವಲ್ಪ ಖರ್ಚು ಮಾಡಿ ಫ್ರೆಂಡ್; ರಿಷಭ್ ಪಂತ್ 27 ಕೋಟಿ ರೂಪಾಯಿಗಳ ಐಪಿಎಲ್ ಹರಾಜಿಗೆ ಜೊಮ್ಯಾಟೊ ಪೋಸ್ಟ್ ವೈರಲ್

ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಐಪಿಎಲ್ 18ನೇ ಆವೃತ್ತಿಗಾಗಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಟೀಂ ಇಂಡಿಯಾದ ವಿಕೆಟ್ ಕೀಪರ್ ಕಂ ಬ್ಯಾಟರ್ ರಿಷಭ್ ಪಂತ್ ಹೊಸ ದಾಖಲೆಯನ್ನು ಬರೆದಿದ್ದಾರೆ. ಪಂತ್ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇಂದು (ನವೆಂಬರ್ 24, ಭಾನವಾರ) ನಡೆದ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 27 ಕೋಟಿ ರೂಪಾಯಿಗೆ ರಿಷಭ್ ಪಂತ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಪಂತ್ ಅವರ ಐಪಿಎಲ್ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಬಿಕರಿಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಆನ್ ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮ್ಯಾಟೊ ತಮ್ಮದೇ ಶೈಲಿಯಲ್ಲಿ ಪೋಸ್ಟ್ ಮಾಡಿದ್ದು, ನೆಟ್ಟಿಗರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ.