Latest Kannada Nation & World
ನವೆಂಬರ್ 22ಕ್ಕೆ ಜೀಬ್ರಾ ಸಿನಿಮಾ ರಿಲೀಸ್; ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ದರ್ಶನ ಪಡೆದ ಡಾಲಿ ಧನಂಜಯ್

ಕನ್ನಡ-ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿರುವ ಧನಂಜಯ್ ಅಭಿನಯದ 26ನೇ ಸಿನಿಮಾ
ಜೀಬ್ರಾ ಚಿತ್ರವನ್ನು ಪದ್ಮಜಾ ಫಿಲ್ಮ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡಿದ್ದಾರೆ. ಕ್ರೈಂ ಮತ್ತು ಥ್ರಿಲ್ಲರ್ ಕಂಟೆಂಟ್ ಇರುವ ಸಿನಿಮಾ ಇದ್ದಾಗಿದ್ದು ಚಿತ್ರಕ್ಕೆ ಈಶ್ವರ್ ಕಾರ್ತಿಕ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೀಬ್ರಾ, ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ. ತೆಲುಗು ನಟ ಸತ್ಯದೇವ್ ಅವರಿಗೂ ಇದು 26ನೇ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾಗಳ ಜೊತೆಗೆ ಪುಷ್ಪ 2, ಉತ್ತರಕಾಂಡ, ಅಣ್ಣ ಫ್ರಮ್ ಮೆಕ್ಸಿಕೋ, ನಾಡಪ್ರಭು ಕೆಂಪೇಗೌಡ ಸಿನಿಮಾದಲ್ಲಿ ಡಾಲಿ ನಟಿಸುತ್ತಿದ್ದಾರೆ. ನವೆಂಬರ್ 1, ಕನ್ನಡ ರಾಜ್ಯೋತ್ಸವದಂದು ಧನಂಜಯ್ ಮದುವೆ ಆಗುತ್ತಿರುವ ಸಿಹಿ ಸುದ್ದಿಯನ್ನು ರಾಜ್ಯದ ಜನತೆಯೊಂದಿಗೆ ಹಂಚಿಕೊಂಡಿದ್ದರು. ಮುಂದಿನ ವರ್ಷ ಫೆಬ್ರವರಿಯಲ್ಲಿ ಧನಂಜಯ್ ಡಾಕ್ಟರ್ ಧನ್ಯತಾ ಅವರನ್ನು ಕೈ ಹಿಡಿಯಲಿದ್ದಾರೆ.