Latest Kannada Nation & World
ಪ್ರೊ ಕಬಡ್ಡಿ ಲೀಗ್ ಪ್ಲೇಆಫ್‌ಗೆ ಲಗ್ಗೆ ಇಟ್ಟ 6 ತಂಡಗಳು; ಸಮಯ, ವೇಳಾಪಟ್ಟಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

ಲೀಗ್ ಹಂತದ ಬಳಿಕ ಹರಿಯಾಣ ಸ್ಟೀಲರ್ಸ್ ತಂಡವು ಅತ್ಯಂತ ಬಲಿಷ್ಠ ತಂಡ ಎನಿಸಿಕೊಂಡಿದೆ. ಒಟ್ಟು 22 ಪಂದ್ಯಗಳಿಂದ 16 ಗೆಲುವು ಮತ್ತು ಆರು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಇದೇ ವೇಳೆ ದಬಾಂಗ್ ಡೆಲ್ಲಿ ಎಫ್‌ಸಿ ತಂಡವು 13 ಗೆಲುವುಗಳೊಂದಿಗೆ 84 ಅಂಕಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಯುಪಿ ಯೋಧಾಸ್, ಒಟ್ಟು 13 ಗೆಲುವಿನಿಂದ 79 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ದಾಖಲೆಯ ಮೂರು ಬಾರಿಯ ಪಿಕೆಎಲ್ ಚಾಂಪಿಯನ್ ಪಾಟ್ನಾ ಪೈರೇಟ್ಸ್ 77 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಪ್ಲೇಆಫ್‌ಗೆ ಲಗ್ಗೆ ಇಟ್ಟ ಕೊನೆಯ ತಂಡವಾದ ಯು ಮುಂಬಾ 71 ಅಂಕಗಳೊಂದಿಗೆ ಐದನೇ ಸ್ಥಾನವನ್ನು ಗಳಿಸಿದರೆ, ಜೈಪುರ ಪಿಂಕ್ ಪ್ಯಾಂಥರ್ಸ್ 70 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ.