Latest Kannada Nation & World
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಮತ್ತೊಂದು ಆಘಾತ; ತಂದೆ ನಿಧನದ ಕಾರಣ ತಂಡ ತೊರೆದ ಬೌಲಿಂಗ್ ಕೋಚ್

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ (Morne Morkel), ದುಬೈನಿಂದ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ. ತಮ್ಮ ತಂದೆಯ ನಿಧನದಿಂದಾಗಿ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಭಾರತ ತಂಡ ತೊರೆದು ತವರಿಗೆ ಹೋಗಿದ್ದಾರೆ. ಸದ್ಯ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಆಡಲು ಭಾರತ ತಂಡ ಪ್ರಸ್ತುತ ಯುಎಇಯಲ್ಲಿದೆ. ಬುಧವಾರ (ಫೆ.19) ಟೂರ್ನಿ ಆರಂಭವಾಗಲಿದ್ದು, ಆತಿಥೇಯ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಗುರುವಾರ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ಆಡಲಿದೆ.