Latest Kannada Nation & World
ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ಹೊಸ ಲುಕ್ನಲ್ಲಿ ವಿರಾಟ್ ಕೊಹ್ಲಿ; ಕಿಂಗ್ ನಯಾ ಸ್ಟೈಲ್ಗೆ ಫ್ಯಾನ್ಸ್ ಫಿದಾ, VIDEO
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಕೆಟ್ಟ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮೆಲ್ಬೋರ್ನ್ ಟೆಸ್ಟ್ಗೂ ಮುನ್ನ ಹೊಸ ಹೇರ್ಸ್ಟೈಲ್ನೊಂದಿಗೆ ಕಾಣಿಸಿಕೊಂಡಿದ್ದಾರೆ. ಬಿಜಿಟಿಯ 2024-25ರ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದರು. ಆದರೆ, 2, 3ನೇ ಟೆಸ್ಟ್ನಲ್ಲಿ ರನ್ ಗಳಿಸಲು ಹೆಣಗಾಡಿದರು. ಭಾರತ ತಂಡ ಮೆಲ್ಬೋರ್ನ್ ತಲುಪಿದ್ದು, ಬಾಕ್ಸಿಂಗ್ ಡೇ ಟೆಸ್ಟ್ಗೆ ಸಿದ್ಧತೆ ಪ್ರಾರಂಭಿಸಿದೆ. ಆದರೆ, 4ನೇ ಪಂದ್ಯಕ್ಕೂ ಮುನ್ನ ಕೊಹ್ಲಿಯ ಹೊಸ ಲುಕ್ ಎಲ್ಲರ ಗಮನ ಸೆಳೆದಿದೆ.