Latest Kannada Nation & World
ಬಿ ಯುವರ್ ಓನ್ ಶುಗರ್ ಡ್ಯಾಡಿ; ಡಿವೋರ್ಸ್ ಬಳಿಕ ಗಮನ ಸೆಳೆದ ಚಹಲ್ ಟಿಶರ್ಟ್, ಏನಿದರ ಅರ್ಥ?

ಭಾರತ ಕ್ರಿಕೆಟ್ ತಂಡದ ಆಟಗಾರ ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. 2020ರಲ್ಲಿ ವಿವಾಹವಾದ ಈ ದಂಪತಿ, ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ವರ್ಷದ ಫೆಬ್ರವರಿ 5ರಂದು, ಅವರು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದರು. ಇಂದು (ಮಾರ್ಚ್ 20) ಮುಂಬೈನಲ್ಲಿರುವ ಕೌಟುಂಬಿಕ ನ್ಯಾಯಾಲಯದಲ್ಲಿ ಇಬ್ಬರೂ ತಮ್ಮ ವಿಚ್ಛೇದನದ ಅಂತಿಮ ಪ್ರಕ್ರಿಯೆಗೆ ಹಾಜರಾಗಿದ್ದರು. ಕೋರ್ಟ್ ವಿಚ್ಛೇದನ ಅರ್ಜಿಯನ್ನು ಸ್ವೀಕರಿಸಿ, ಇಬ್ಬರೂ ಬೇರೆ ಬೇರೆ ಆಗಲು ಅನುಮತಿ ನೀಡಿದೆ.