Latest Kannada Nation & World
ಭಾರತ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟಿ 20 ಸರಣಿ ಕೊನೆಯ ಪಂದ್ಯ: ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಡಿಯಾ

ಜೋಹಾನ್ಸ್ ಬರ್ಗ್: ಪ್ರವಾಸಿ ಭಾರತ ತಂಡವು ದಕ್ಷಿಣಾ ಆಫ್ರಿಕಾ ವಿರುದ್ದದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾದ ಜೋಹ್ಸಾನ್‌ಬರ್ಗ್‌ನಲ್ಲಿ ನಡೆಯುತ್ತಿರುವ ನಾಲ್ಕು ಟಿ20 ಪಂದ್ಯಗಳ ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಭಾರತವು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ. ಈಗಾಗಲೇ ಎರಡು ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿ ಸರಣಿಯಲ್ಲಿ 2-1 ರಲ್ಲಿ ಮುನ್ನಡೆ ಸಾಧಿಸಿದೆ. ಮೊದಲು ಹಾಗೂ ಮೂರನೇ ಪಂದ್ಯವನ್ನು ಭಾರತ ಗೆದ್ದರೆ, ಆತಿಥೇಯ ದಕ್ಷಿಣ ಆಫ್ರಿಕಾ ಎರಡನೇ ಪಂದ್ಯ ಗೆದ್ದಿತ್ತು. ಇದರಿಂದ ಈ ಪಂದ್ಯ ಗೆದ್ದರೆ ಸರಣಿ ಭಾರತದ ಪರವಾಗಿ ಆಗಲಿದೆ. ಒಂದು ವೇಳೆ ಸೋತರೆ ಸರಣಿ ಸಮವಾಗಲಿದೆ.