Latest Kannada Nation & World
ಭಾರತ ಮತ್ತು ಇತರ 13 ದೇಶಗಳ ವೀಸಾವನ್ನು ತಾತ್ಕಾಲಿಕವಾಗಿ ನಿಷೇಧಿಸಿದ ಸೌದಿ ಅರೇಬಿಯಾ; ಇಲ್ಲಿದೆ ಕಾರಣ

ನವದೆಹಲಿ: ಇನ್ನೇನು ಹಜ್ ಯಾತ್ರೆ ಸಮೀಪಿಸುತ್ತಿದೆ ಸೌದಿ ಅರೇಬಿಯಾಕ್ಕೆ ಸಾಕಷ್ಟು ಜನರು ಪ್ರಯಾಣ ಬೆಳೆಸಲಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಸೌದಿ ಅರೇಬಿಯಾ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ ಸೇರಿದಂತೆ 14 ರಾಷ್ಟ್ರಗಳ ಮೇಲೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.