Latest Kannada Nation & World
ಮತ ಎಣಿಕೆ ಶುರುವಾಗಿದ್ದು ಆರಂಭಿಕ ಟ್ರೆಂಡ್ ಪ್ರಕಾರ ಮಹಾಯುತಿಗೆ ಮುನ್ನಡೆ, ಗಮನಿಸಬೇಕಾದ 5 ಮುಖ್ಯ ಅಂಶಗಳು ಇಲ್ಲಿವೆ

Maharashtra Election results: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು (ನವೆಂಬರ್ 23) ಬೆಳಗ್ಗೆ 8 ಗಂಟೆಗೆ ಶುರುವಾಗಿದ್ದು, ಆರಂಭಿಕ ಟ್ರೆಂಡ್ ಪ್ರಕಾರ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ಮಹಾಯುತಿ ಮುನ್ನಡೆಯಲ್ಲಿದೆ. ಆರಂಭಿಕ ಟ್ರೆಂಡ್ ಪ್ರಕಾರ, 288 ಸ್ಥಾನಗಳ ಅಂಚೆ ಮತ ಎಣಿಕೆ ಶುರುವಾಗುತ್ತಿದ್ದಂತೆ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮಹಾಯುತಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) 19 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ನವೆಂಬರ್ 20ರಂದು ನಡೆದಿದ್ದು, ಈ ಬಾರಿ ಶೇಕಡ 66 ಮತದಾನವಾಗಿದೆ. 2019ರಲ್ಲಿ ಶೇಕಡ 61 ಮತದಾನವಷ್ಟೇ ಆಗಿತ್ತು.