Latest Kannada Nation & World
ಭಾರತ ಡಬ್ಲ್ಯುಟಿಸಿ ಫೈನಲ್ ಪ್ರವೇಶಿಸದಿದ್ದರೆ ಸಿಡ್ನಿ ಟೆಸ್ಟ್ ರೋಹಿತ್ ಶರ್ಮಾ ಕೊನೆಯ ಪಂದ್ಯ? ನಿವೃತ್ತಿ ಸುಳಿವು ನೀಡಿದ ವರದಿ

ಟೀಮ್ ಇಂಡಿಯಾ ಮುಂದಿನ ಕ್ಯಾಪ್ಟನ್ ಜಸ್ಪ್ರೀತ್ ಬುಮ್ರಾ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ರೋಹಿತ್ ಶರ್ಮಾ ಕಳಪೆ ಪ್ರದರ್ಶನವು, ಅವರ ನಿವೃತ್ತಿ ಕುರಿತು ಚರ್ಚೆ ಹೆಚ್ಚಿಸಿದೆ. ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿಯೂ ಒಂದಂಕಿ ಮೊತ್ತಕ್ಕೆ ಔಟಾಗಿ ಸತತ ವೈಫಲ್ಯ ಎದುರಿಸುತ್ತಿರುವ ಹಿಟ್‌ಮ್ಯಾನ್, ತಮ್ಮ ಆಟವನ್ನು ಮರೆತಂತಿದೆ. ಈಗಾಗಲೇ ಭಾರತ ತಂಡವು ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ 2-1 ಅಂತರದಿಂದ ಹಿನ್ನಡೆ ಅನುಭವಿಸಿದ್ದು, ಟೆಸ್ಟ್‌ನಲ್ಲಿ ಕಳಪೆ ಫಾರ್ಮ್ ಬೆನ್ನಲ್ಲೇ ರೋಹಿತ್ ಶರ್ಮಾ ಈ ಸ್ವರೂಪಕ್ಕೆ ವಿದಾಯ ಹೇಳುವ ಕುರಿತು ಚರ್ಚೆಗಳು ಶುರುವಾಗಿವೆ.