Latest Kannada Nation & World
ಆಸ್ಟ್ರೇಲಿಯಾ ಮಣಿಸಿ 5ನೇ ಬಾರಿಗೆ ಫೈನಲ್ ಪ್ರವೇಶದ ಜೊತೆಗೆ 2023ರ ಏಕದಿನ ವಿಶ್ವಕಪ್ ಸೋಲಿನ ಮುಯ್ಯಿ ತೀರಿಸಿಕೊಂಡ ಭಾರತ

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ಸ್ಟೀವ್ ಸ್ಮಿತ್ ಮತ್ತು ಅಲೆಕ್ಸ್ ಕ್ಯಾರಿ ಅವರ ಅಮೋಘ ಅರ್ಧಶತಕಗಳ ಸಹಾಯದಿಂದ 49.3 ಓವರ್ಗಳಿಗೆ 264 ರನ್ಗೆ ಆಲೌಟ್ ಆಯಿತು. ಮೊಹಮ್ಮದ್ ಶಮಿ ಪ್ರಮುಖ 3 ವಿಕೆಟ್ ಪಡೆದು ಮಿಂಚಿದರೆ, ವರುಣ್ ಚಕ್ರವರ್ತಿ, ರವೀಂದ್ರ ಜಡೇಜಾ 2 ವಿಕೆಟ್ ಕಬಳಿಸಿ ಆಸೀಸ್ ತಂಡದ ರನ್ ನಿಯಂತ್ರಣಕ್ಕೆ ಕಾರಣರಾದರು. 265 ರನ್ಗಳ ಸ್ಪರ್ಧಾತ್ಮಕ ಮೊತ್ತ ಗುರಿ ಬೆನ್ನಟ್ಟಿದ ಭಾರತ, ವಿರಾಟ್ ಕೊಹ್ಲಿ ಅಮೋಘ ಅರ್ಧಶತಕ ಸೇರಿದಂತೆ ಉಳಿದ ಬ್ಯಾಟರ್ಗಳ ಅಬ್ಬರದ ಪ್ರದರ್ಶನದ ಕಾರಣ 48.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು.