Latest Kannada Nation & World
‘ರುದ್ರ ಗರುಡ ಪುರಾಣ’ ಚಿತ್ರದ ಮೊದಲ ಹಾಡು ಬಿಡುಗಡೆ; ವರ್ಷಾಂತ್ಯಕ್ಕೆ ಥಿಯೇಟರ್‌ಗೆ ಬರಲಿದೆ ರಿಷಿ ಸಿನಿಮಾ

ಹೆಸರಾಂತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಬಳಿ ಕಾರ್ಯ ನಿರ್ವಹಿಸಿರುವ ಕೆ.ಪಿ (ಕೃಷ್ಣಪ್ರಸಾದ್) ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಇಂದು ಬಿಡುಗಡೆಯಾದ ಹಾಡು ಹಾಗೂ ಹಾಡಿದವರ ಬಗ್ಗೆ ಮಾಹಿತಿ ನೀಡಿದರು. ದೇವಿ ಶ್ರೀ ಪ್ರಸಾದ್ ವಿಡಿಯೋ ಮೂಲಕ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಚಿತ್ರದ ಛಾಯಾಗ್ರಾಹಕ ಸಂದೀಪ್ ಕುಮಾರ್, ಹಾಡು ಬರೆದಿರುವ ಮಂಜು ಮಾಂಡವ್ಯ, ಚಿತ್ರದಲ್ಲಿ ನಟಿಸಿರುವ ಅಶ್ವಿನಿ ಗೌಡ, ಶಿವರಾಜ್ ಕೆ.ಆರ್ ಪೇಟೆ, ರಾಮ್ ಪವನ್, ನಂದ, ವಂಶಿ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು ರುದ್ರ ಗರುಡ ಪುರಾಣದ ಬಗ್ಗೆ ಮಾತನಾಡಿದರು.