Latest Kannada Nation & World
ಲೂಸಾನ್ ಡೈಮಂಡ್ ಲೀಗ್; 89.49 ಮೀ ದೂರ ಜಾವೆಲಿನ್ ಎಸೆದು 2ನೇ ಸ್ಥಾನ ಪಡೆದ ನೀರಜ್ ಚೋಪ್ರಾ, ಫೈನಲ್ ಯಾವಾಗ?

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಲೂಸಾನ್ ಡೈಮಂಡ್ ಲೀಗ್‌ನಲ್ಲಿ ಎರಡನೇ ಸ್ಥಾನ ಪಡೆದರು. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿಯೂ ಚಿನ್ನದ ಪದಕ ವಂಚಿತರಾಗಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಚಿನ್ನದ ಹುಡುಗ, ಇದೀಗ ಮತ್ತೊಮ್ಮೆ ಎರಡನೇ ಸ್ಥಾನ ಪಡೆದಿದ್ದಾರೆ. ಗುರುವಾರ ತಡರಾತ್ರಿ ನಡೆದ ಫೈನಲ್ ಈವೆಂಟ್‌ನಲ್ಲಿ, ಕೊನೆಯ ಪ್ರಯತ್ನದಲ್ಲಿ 89.49 ಮೀಟರ್ ದೂರ ಎಸೆಯುವ ಮೂಲಕ ಈ ಋತುವಿನ ಅತ್ಯುತ್ತಮ ಎಸೆತವನ್ನು ದಾಖಲಿಸಿದರು. ಇದು ಅವರ ಪ್ಯಾರಿಸ್ ಒಲಿಂಪಿಕ್ಸ್ ಎಸೆತಕ್ಕಿಂತಲೂ ಉತ್ತಮ ಪ್ರಯತ್ನವಾಗಿದೆ.