Latest Kannada Nation & World
ವಶಪಡಿಸಿಕೊಂಡ ಹಣವನ್ನು ಮರಳಿ ಕೊಡಿ; ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ನಟ

ರೇಣುಕಾಸ್ವಾಮಿ ಕೊಲೆ ಪ್ರಕರಣ
ಎಲ್ಲ ಆರೋಪಿಗಳು ಜೈಲಿನಿಂದ ಹೊರ ಬಂದಿದ್ದು, ಮುಖ್ಯ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ತಮ್ಮ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ರೇಣುಕಾಸ್ವಾಮಿ ಮನೆಯಲ್ಲಿ ತಮಗೆ ನ್ಯಾಯ ಸಿಕ್ಕಿಲ್ಲ ಎಂದು ರೇಣುಕಾಸ್ವಾಮಿ ತಂದೆ ಅಸಮಾಧಾನಗೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳು ಜೈಲಿನಿಂದ ಹೊರ ಬಂದಿದ್ದಾರೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾತೂ ಕೇಳಿ ಬಂದಿತ್ತು. ಆದರೆ ಈ ಬಗ್ಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ನಾವು ಯಾವುದೇ ಹಣ ಸಹಾಯವನ್ನೂ, ಯಾರಿಂದಲೂ ಪಡೆದಿಲ್ಲ ಎಂದು ಹೇಳಿದ್ದಾರೆ.