Latest Kannada Nation & World
ಶಿವಾಜಿ ಜಯಂತಿ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆ; ಛತ್ರಪತಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ರಿಷಬ್ ಶೆಟ್ಟಿಯ ಮೊದಲ ನೋಟ

ಶಿವಾಜಿ ಜಯಂತಿಯ ಪ್ರಯುಕ್ತ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರತಂಡ ಹೊಸ ಅಪ್‌ಡೇಟ್ ನೀಡಿದೆ. ವಾಜಿ ಮಹಾರಾಜರ ಜೀವನವನ್ನು ಆಧರಿಸಿದ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಶಿವಾಜಿ ಮಹರಾಜರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟಾರ್ ಡೈರೆಕ್ಟರ್ ಸಂದೀಪ್ ಸಿಂಗ್ ಈ ಚಿತ್ರದ ಸಾರಥ್ಯ ವಹಿಸಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡುತ್ತಿರುವವರ ಹೆಸರನ್ನು ಇತ್ತೀಚೆಗೆ ಘೋಷಿಸಿದ್ದರು. ಇದೀಗ ಪೋಸ್ಟರ್ ಹಂಚಿಕೊಂಡಿದ್ದಾರೆ. ಛಾಯಾಗ್ರಹಣ, ಸಂಕಲನ ಮತ್ತು ಸಂಗೀತ ಸೇರಿದಂತೆ ಎಲ್ಲ ವಿಭಾಗಗಲ್ಲಿಯೂ ಪರಿಣಿತರೇ ಇರಲಿದ್ದಾರೆ ಎಂದು ತಿಳಿದು ಬಂದಿದೆ,