Latest Kannada Nation & World

ಸಿಂಹಾಚಲಂ ದೇವಾಲಯ ಗೋಡೆ ಕುಸಿತ ಪ್ರಕರಣ; ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Share This Post ????

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ನಡೆದ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಸಿಂಹಾಚಲಂ ದೇವಾಲಯ ಗೋಡೆ ಕುಸಿತ ಪ್ರಕರಣ; ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಸಿಂಹಾಚಲಂ ದೇವಾಲಯ ಗೋಡೆ ಕುಸಿತ ಪ್ರಕರಣ; ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಈ ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡುವುದಾಗಿ ಮೋದಿ ತಿಳಿಸಿದ್ದಾರೆ.

‘ಆಂಧ್ರಪ್ರದೇಶದ ವಿಶಾಖಪಟ್ಟಣದ ಸಿಂಹಾಚಲಂ ದೇವಾಲಯ ಗೋಡೆ ಕುಸಿದು ಜೀವ ಕಳೆದುಕೊಂಡವರ ವಿಚಾರ ತಿಳಿದು ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗು ಗುಣಮುಖರಾಗಲಿ. ಮೃತರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡಲಾಗುವುದು‘ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ರೇಷ್ಮಾ ಶೆಟ್ಟಿ: ‘ಹಿಂದೂಸ್ತಾನ್ ಟೈಮ್ಸ್​​ ಕನ್ನಡ’ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

Whats_app_banner

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!