Latest Kannada Nation & World
ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ

10 ಅರ್ಜಿಗಳ ವಿಚಾರಣೆ
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಏಪ್ರಿಲ್ 16 ರಂದು ಸುಮಾರು 10 ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ. ಅರ್ಜಿದಾರರಲ್ಲಿ ಲೋಕಸಭೆ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ದೆಹಲಿ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣೆಯ ಸಂಘ (ಎಪಿಸಿಆರ್), ಮೌಲಾನಾ ಅರ್ಷದ್ ಮದನಿ, ಸಮಸ್ತ ಕೇರಳ ಜಮೀಯತುಲ್ ಉಲೇಮಾ, ಅಂಜುಮ್ ಕದ್ರಿ ಮತ್ತು ಇತರರು ಸೇರಿದ್ದಾರೆ.