Latest Kannada Nation & World
ಸೈಫ್ ಅಲಿ ಖಾನ್ ತೋಳಿನ ಗಾಯಕ್ಕೆ ಹತ್ತು ಹೊಲಿಗೆ; ಹೀಗಿದೆ ಕರೀನಾ ಕಪೂರ್ ಖಾನ್ ತಂಡದ ಹೇಳಿಕೆ

ಪೊಲೀಸ್ ಅಧಿಕಾರಿ ಘಟನೆ ಬಗ್ಗೆ ಹೇಳಿದ್ದಿಷ್ಟು
ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಈ ಘಟನೆಯನ್ನು ದೃಢಪಡಿಸಿದ್ದು, ಸೈಫ್ ಅಲಿಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ದರೋಡೆಕೋರನೊಂದಿಗಿನ ಸಂಘರ್ಷದಲ್ಲಿ ಅವರು ಇರಿದಿದ್ದಾರೆಯೇ ಅಥವಾ ಗಾಯಗೊಂಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಿದ್ದೇವೆ. ಮುಂಬೈ ಕ್ರೈಂ ಬ್ರಾಂಚ್ ಕೂಡ ಘಟನೆಯ ಬಗ್ಗೆ ಸಮಾನಾಂತರ ತನಿಖೆ ನಡೆಸುತ್ತಿದೆ ಎಂದು ಅವರು ವಿವರಿಸಿದರು. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದು ಆರೋಪಿ ಪತ್ತೆಗಾಗಿ ಶೋಧ ನಡೆಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.