Latest Kannada Nation & World
ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿ ಬಾಂಗ್ಲಾದೇಶಿ ಪ್ರಜೆ; ನಟನ ಮನೆಗೆ ಕಳ್ಳತನಕ್ಕೆ ಬಂದಿದ್ದ ಎಂದ ಪೊಲೀಸರು

ನಟ ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇಂದು ಮುಂಜಾನೆ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಭಾನುವಾರ (ಜ.19) ಪತ್ರಿಕಾಗೋಷ್ಠಿಯಲ್ಲಿ ಮುಂಬೈ ಪೊಲೀಸರು ಹೆಚ್ಚಿನ ಮಾಹಿತಿ ನೀಡಿದ್ದಾರೆ. ನಟನ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿತ ಆರೋಪಿ ಬಾಂಗ್ಲಾದೇಶದ ಪ್ರಜೆಯಾಗಿರಬಹುದು ಎಂದು ಹೇಳಿದ್ದಾರೆ. ಭಾರತಕ್ಕೆ ಬಂದ ನಂತರ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.