Latest Kannada Nation & World
ಒಟಿಟಿಗೂ ಮುನ್ನವೇ ಟಿವಿಯಲ್ಲಿ ಬರ್ತಿದೆ ಉಪೇಂದ್ರ ನಟಿಸಿ, ನಿರ್ದೇಶಿಸಿದ ಯುಐ ಸಿನಿಮಾ

UI ಸಿನಿಮಾವನ್ನು ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಪ್ರೈಸಸ್ ಬ್ಯಾನರ್‌ನಲ್ಲಿ ಜಿ. ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು (ಲಹರಿ ವೇಲು), ಜಿ. ರಮೇಶ್, ಜಿ. ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಚಿತ್ರದಲ್ಲಿ ಉಪೇಂದ್ರಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದರೆ, ಸಾಧುಕೋಕಿಲ, ಮುರಳಿ ಶರ್ಮಾ, ಇಂದ್ರಜಿತ್ ಲಂಕೇಶ್, ನಿಧಿ ಸುಬ್ಬಯ್ಯ, ಓಂ ಸಾಯಿ ಪ್ರಕಾಶ್, ಗುರುಪ್ರಸಾದ್, ರವಿ ಶಂಕರ್ ತಾರಾಗಣದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.