Latest Kannada Nation & World
ಯೂನಿಯನ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ; 2691 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಇಲ್ಲಿದೆ ವಿವರ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Apprentice Recruitment 2025) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಈಗಾಗಲೇ ಆರಂಭಿಸಿದೆ. ಸದ್ಯ ಈ ಹುದ್ದೆಯ ನೋಂದಣಿ ಪ್ರಕ್ರಿಯೆಯ ಗಡುವು ವಿಸ್ತರಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ಇನ್ನೂ ಎರಡು ದಿನ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. 2025ರ ಮಾರ್ಚ್ 12ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ (unionbankofindia.co.in) ಮೂಲಕ ಅರ್ಜಿ ಸಲ್ಲಿಸಲು ನೇರ ಲಿಂಕ್ ಅನ್ನು ಬಳಸಬಹುದು.