Latest Kannada Nation & World
ಗುಜರಾತ್ ಟೈಟನ್ಸ್ vs ರಾಜಸ್ಥಾನ್ ರಾಯಲ್ಸ್; ನಾಳಿನ ಐಪಿಎಲ್ ಪಂದ್ಯದ 10 ಪ್ರಮುಖ ಅಂಶಗಳು

ಐಪಿಎಲ್‌ನಲ್ಲಿ ನಾಳೆ (ಏಪ್ರಿಲ್ 9) ಸತತ ಗೆಲುವು ಕಂಡಿರುವ ಎರಡು ತಂಡಗಳ ನಡುವೆ ರೋಚಕ ಹಣಾಹಣಿ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟನ್ಸ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ (GT vs RR) ಸವಾಲು ಹಾಕಲಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಟೂರ್ನಿಯ ಮೊದಲ ಪಂದ್ಯದಲ್ಲಿ ಸೋತಿದ್ದ ಗುಜರಾತ್ ಟೈಟನ್ಸ್, ಆ ನಂತರ ಆಡಿದ ಸತತ ಮೂರು ಪಂದ್ಯಗಳಲ್ಲಿ ಭರ್ಜರಿಯಾಗಿ ಗೆದ್ದು ಉತ್ತಮ ಫಾರ್ಮ್‌ನಲ್ಲಿದೆ. ಅತ್ತ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದ ಆರ್‌ಆರ್, ಕೊನೆಯ ಎರಡು ಪಂದ್ಯಗಳಲ್ಲಿ ಗೆದ್ದು ವಿಶ್ವಾಸದಿಂದ ಬೀಗುತ್ತಿದೆ. ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳನ್ನು ನೋಡೋಣ.