Astrology
ಗೃಹಿಣಿಯರಿಗೆ ತವರಿನ ಉಡುಗೊರೆ, ವಿದೇಶ ಪ್ರಯಾಣ ಯೋಗ, ಕಲಾವಿದರಿಗೆ ಉನ್ನತ ಗೌರವ

‘ನಾಳೆ ಏನಾಗುವುದೋ ಬಲ್ಲವರು ಯಾರು’ ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ‘ದಿನ ಭವಿಷ್ಯ’ ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ ಇದು. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜುಲೈ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಜುಲೈ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.