Latest Kannada Nation & World
ಚಾಂಪಿಯನ್ಸ್ ಟ್ರೋಫಿ: ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 362 ರನ್ ಸಿಡಿಸಿ ದಾಖಲೆ ನಿರ್ಮಿಸಿದ ನ್ಯೂಜಿಲೆಂಡ್

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ತಂಡ ಅಬ್ಬರಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಕಿವೀಸ್, ರಚಿನ್ ರವೀಂದ್ರ ಹಾಗೂ ಕೇನ್ ವಿಲಿಯಮ್ಸನ್ ಶತಕದಾಟದ ನೆರವಿಂದ ಬೃಹತ್ ಮೊತ್ತ ಕಲೆ ಹಾಕಿದೆ. ಇದರೊಂದಿಗೆ ಹಲವು ದಾಖಲೆಗಳನ್ನೂ ನಿರ್ಮಿಸಿದೆ.