Latest Kannada Nation & World
ಬೆಂಗಳೂರು ಬುಲ್ಸ್ ತಂಡದ ಹೊಸ ಕೋಚ್ ಬಿ ಸಿ ರಮೇಶ್ ಯಾರು? ಗೂಳಿಗಳ ಬಳಗಕ್ಕೆ ಇನ್ಮುಂದೆ ಇವರೇ ದ್ರೋಣಾಚಾರ್ಯ

ಯಶಸ್ವಿ ಕೋಚ್
ಹೊಸ ಕೋಚ್ ನೇಮಕವಾದ ಕುರಿತು ಬೆಂಗಳೂರು ಬುಲ್ಸ್ ತಂಡವು ಮಾಹಿತಿ ನೀಡಿದೆ. ಕರ್ನಾಟಕದ ಹೆಮ್ಮೆ, ಅರ್ಜುನ ಪ್ರಶಸ್ತಿ ಪುರಸ್ಕೃತ ಬಿ.ಸಿ. ರಮೇಶ್ ಸರ್, ಈಗ ಬೆಂಗಳೂರು ಬುಲ್ಸ್ ತಂಡದ ದ್ರೋಣ. 2018ರಲ್ಲಿ ಗೂಳಿ ಪಡೆಗೆ ತಮ್ಮ ಮೊದಲ ಟ್ರೋಫಿ ದಕ್ಕಿಸಿದ ರಮೇಶ್ ಸರ್, ಪುಣೆ ಹಾಗೂ ಬೆಂಗಾಲ್ ತಂಡಗಳೊಂದಿಗೂ ವಿಜಯ ಸಾಧಿಸಿದ್ದಾರೆ. ಗೂಳಿ ಪಡೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿರೀಕ್ಷೆಯೊಂದಿಗೆ, ಬಿ.ಸಿ. ರಮೇಶ್ ಅವರನ್ನು ಸ್ವಾಗತಿಸುತ್ತಿದ್ದೇವೆ” ಎಂದು ಪೋಸ್ಟ್ ಮಾಡಿದೆ.