Latest Kannada Nation & World
ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಕಿಚ್ಚ ಸುದೀಪ್; ಪಂಚಭೂತಗಳಲ್ಲಿ ಲೀನವಾದ ಸರೋಜಾ ಸಂಜೀವ್

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಭಾನುವಾರ ಬೆಳಗ್ಗೆ 7.04 ಸುಮಾರಿಗೆ ಸರೋಜಾ ನಿಧನರಾಗಿದ್ದಾರೆ.