Latest Kannada Nation & World
ಅಪಘಾತಕ್ಕೊಳಗಾಗಿದ್ದ ರಿಷಭ್ ಪಂತ್ ಬಲ ಮೊಣಕಾಲಿಗೆ ಗಂಭೀರ ಗಾಯ; ಮೈದಾನ ತೊರೆದ ವಿಕೆಟ್ ಕೀಪರ್, ಭಾರತಕ್ಕೆ ಗಾಯದ ಮೇಲೆ ಬರೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅಲ್ಪಮೊತ್ತಕ್ಕೆ ಆಲೌಟ್ ಆದ ಭಾರತ ತಂಡ, ಕಳಪೆ ದಾಖಲೆಗಳನ್ನು ನಿರ್ಮಿಸಿತು. ದಿನದಾಟದುದ್ದಕ್ಕೂ ಮೇಲುಗೈ ಸಾಧಿಸಿದ ಕಿವೀಸ್, ಪಂದ್ಯದಲ್ಲಿ ಹಿಡಿತ ಸಾಧಿಸಿತು. ಆದರೆ, ಭಾರತ ತಂಡ ದಿನದ ಯಾವುದೇ ಅವಧಿಯಲ್ಲಿ ಅಬ್ಬರಿಸಲು ಸಾಧ್ಯವಾಗಲಿಲ್ಲ. ಭಾರತ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡ ಬಳಿಕ ತನ್ನ ಮೊದಲೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ದಿನದ ಅಂತ್ಯಕ್ಕೆ ಸುಸ್ಥಿತಿಯಲ್ಲಿದೆ. ಆದರೆ, ಭಾರತಕ್ಕೆ ಗಾಯದ ಸಮಸ್ಯೆ ಕಾಡಿದೆ. ಹೀಗಾಗಿ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿಕೆಟ್ ಕೀಪಿಂಗ್ ಮಾಡುತ್ತಿದ್ದ ರಿಷಭ್ ಪಂತ್ ಮೊಣಕಾಲಿಗೆ ಗಾಯವಾಗಿದೆ. ಹೀಗಾಗಿ ತಕ್ಷಣವೇ ಅವರು ಮೈದಾನದಿಂದ ಹೊರನಡೆದಿದ್ದಾರೆ.