Latest Kannada Nation & World
ಶ್ರೇಯಸ್ ಮಂಜು ನಟನೆಯ ದಿಲ್‌ದಾರ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಟ ಶರಣ್ ಸೊಸೆ ಕೀರ್ತಿ ಕೃಷ್ಣ

ಹೀಗಿದೆ ಚಿತ್ರದ ತಾರಾಗಣ
ಅಂದುಕೊಂಡಂತೆಯೇ ಎಲ್ಲ ನಡೆದರೆ ಇದೇ ಯುಗಾದಿಯ ಆಸುಪಾಸಲ್ಲಿ ದಿಲ್ ದಾರ್ ಚಿತ್ರ ತೆರೆಗೆ ಬರಲಿದೆ. ಈ ಚಿತ್ರದ ಮೂಲಕ ಕೀರ್ತಿ ಕೃಷ್ಣ ಅವರಿಗೂ ಬಹುದೊಡ್ಡ ಬ್ರೇಕ್ ಸಿಗುವ ನಿರೀಕ್ಷೆಗಳಿವೆ. ಎಲ್ಲ ವರ್ಗಕ್ಕೂ ಹಿಡಿಸುವಂತೆ ರೂಪುಗೊಂಡಿರುವ ಈ ಸಿನಿಮಾದಲ್ಲಿ ಭರಪೂರ ಮನೋರಂಜನೆ ಇರಲಿದೆ. ಸಾಧು ಕೋಕಿಲ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಸೀನುಗಳಲ್ಲಿ ಶ್ರೇಯಸ್ ಮಂಜು ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಲಿದ್ದಾರೆಂಬುದು ಚಿತ್ರತಂಡದ ಭರವಸೆ.